Bapu Padmanabha - Ayya Nee Kelidade Akkamahadevi lyrics
Artist:
Bapu Padmanabha
album: Vachana Antaranga, Vol. 1
ಅಯ್ಯಾ, ನೀನು ಕೇಳಿದಡೆ ಕೇಳು, ಕೇಳಿದಡೆ ಮಾಣು
ಆನು ನಿನ್ನ ಹಾಡಿದಲ್ಲದೆ ಸೈರಿಸಲಾರೆನಯ್ಯಾ
ಅಯ್ಯಾ, ನೀನು ನೋಡಿದಡೆ ನೋಡು, ನೋಡಿದಡೆ ಮಾಣು
ಆನು ನಿನ್ನನಪ್ಪಿದಲ್ಲದೆ ಸೈರಿಸಲಾರೆನಯ್ಯಾ
ಅಯ್ಯಾ, ನೀನು ಒಲಿದಡೆ ಒಲಿ, ಒಲಿಯದಡೆ ಮಾಣು
ಆನು ನಿನ್ನ ಪೂಜಿಸಿದಲ್ಲದೆ ಸೈರಿಸಲಾರೆನಯ್ಯಾ
ಚನ್ನಮಲ್ಲಿಕಾರ್ಜುನಯ್ಯಾ
ಆನು ನಿಮ್ಮನರ್ಚಿಸಿ ಪೂಜಿಸಿ
ಹರುಷದೊಳೋಲಾಡುವೆನಯ್ಯಾ
ಹರುಷದೊಳೋಲಾಡುವೆನಯ್ಯಾ
ಚನ್ನಮಲ್ಲಿಕಾರ್ಜುನ
ಚನ್ನಮಲ್ಲಿಕಾರ್ಜುನ
Поcмотреть все песни артиста
Other albums by the artist