Kishore Kumar Hits

Supriya Acharya - Amma Ninna Edeyaaladalli (From "Mumbaiyiyalli C Aswath - Live Program") lyrics

Artist: Supriya Acharya

album: Bhavasagara - Kolalanooduvaraare Vol-2


ಅಮ್ಮ, ನಿನ್ನ ಎದೆಯಾಳದಲ್ಲಿ ಗಾಳಕ್ಕೆ ಸಿಕ್ಕ ಮೀನು
ಮಿಡುಕಾಡುತಿರುವೆ ನಾನು ||
ಕಡಿಯಲೋಲ್ಲೆ ನೀ ಕರುಳ ಬಳ್ಳಿ ಒಲವೂಡುತಿರುವ ತಾಯೆ
ಬಿಡದ ಭುವಿಯಾ ಮಾಯೆ
ನಿನ್ನ ರಕ್ಷೆ ಗೂಡಲ್ಲಿ ಬೆಚ್ಚಗೆ ಅಡಗಲಿ ಎಷ್ಟು ದಿನ?
ದೂಡು ಹೊರಗೆ ನನ್ನ
ಓಟ ಕಲಿವೆ, ಒಳ ನೋಟ ಕಲಿವೆ, ನಾ ಕಲಿವೆ ಊರ್ಧ್ವ ಗಮನ
ಓ! ಅಗಾಧ ಗಗನ
ಮೇಲೆ ಹಾರಿ ನಿನ್ನ ಸೆಳೆತ ಮೀರಿ ನಿರ್ಭಾರ ಸ್ಥಿತಿಗೆ ತಲುಪಿ
ಬ್ರಹ್ಮಾಂಡವನ್ನೇ ಬೆದಕಿ
ಇಂಧನ ತೀರಲು ಬಂದೇ ಬರುವೆನು
ಮತ್ತೇ ನಿನ್ನ ತೊಡೆಗೆ
ಮೂರ್ತ ಪ್ರೇಮದೆಡೆಗೆ

Поcмотреть все песни артиста

Other albums by the artist

Similar artists