ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ ಬೆಳಕನಿಟ್ಟು ತೂಗಿದಾಕೆ ಬೆಳಕನಿಟ್ಟು ತೂಗಿದಾಕೆ ನಿನಗೆ ಬೇರೆ ಹೆಸರು ಬೇಕೇ ನಿನಗೆ ಬೇರೆ ಹೆಸರು ಬೇಕೇ ಸ್ತ್ರೀ ಎಂದರೆ ಅಷ್ಟೆ ಸಾಕೇ ಸ್ತ್ರೀ ಎಂದರೆ ಅಷ್ಟೆ ಸಾಕೇ ♪ ಹಸಿರ ಉಟ್ಟ ಬೆಟ್ಟಾಗಳಲಿ ಮೊಲೆ ಹಾಲಿನ ಹೊಳೆಯ ಇಳಿಸಿ ಹಸಿರ ಉಟ್ಟ ಬೆಟ್ಟಾಗಳಲಿ ಮೊಲೆ ಹಾಲಿನ ಹೊಳೆಯ ಇಳಿಸಿ ಬಯಲ ಹಸಿರ ನಗಿಸಿದಾಕೆ ಬಯಲ ಹಸಿರ ನಗಿಸಿದಾಕೆ ನಿನಗೆ ಬೇರೆ ಹೆಸರು ಬೇಕೇ ನಿನಗೆ ಬೇರೆ ಹೆಸರು ಬೇಕೇ ಸ್ತ್ರೀ ಎಂದರೆ ಅಷ್ಟೆ ಸಾಕೇ ಸ್ತ್ರೀ ಎಂದರೆ ಅಷ್ಟೆ ಸಾಕೇ ♪ ಮರಗಿಡ ಹೂ ಮುಂಗುರುಳನು ತಂಗಾಳಿಯ ಬೆರಳೂ ಸವರಿ ಮರಗಿಡ ಹೂ ಮುಂಗುರುಳನು ತಂಗಾಳಿಯ ಬೆರಳೂ ಸವರಿ ಹಕ್ಕಿ ಗಿಲಕಿ ಹಿಡಿಸಿದಾಕೆ ಹಕ್ಕಿ ಗಿಲಕಿ ಹಿಡಿಸಿದಾಕೆ ನಿನಗೆ ಬೇರೆ ಹೆಸರು ಬೇಕೇ ನಿನಗೆ ಬೇರೆ ಹೆಸರು ಬೇಕೇ ಸ್ತ್ರೀ ಎಂದರೆ ಅಷ್ಟೆ ಸಾಕೇ ಸ್ತ್ರೀ ಎಂದರೆ ಅಷ್ಟೆ ಸಾಕೇ ♪ ಮನೆಮನೆಯಲಿ ದೀಪ ಮುಡಿಸಿ ಹೊತ್ತು ಹೊತ್ತಿಗೆ ಅನ್ನ ಉಣಿಸಿ ಮನೆಮನೆಯಲಿ ದೀಪ ಮುಡಿಸಿ ಹೊತ್ತು ಹೊತ್ತಿಗೆ ಅನ್ನ ಉಣಿಸಿ ತಂದೆ ಮಗುವ ತಬ್ಬಿದಾಕೆ ತಂದೆ ಮಗುವ ತಬ್ಬಿದಾಕೆ ನಿನಗೆ ಬೇರೆ ಹೆಸರು ಬೇಕೇ ನಿನಗೆ ಬೇರೆ ಹೆಸರು ಬೇಕೇ ಸ್ತ್ರೀ ಎಂದರೆ ಅಷ್ಟೆ ಸಾಕೇ ಸ್ತ್ರೀ ಎಂದರೆ ಅಷ್ಟೆ ಸಾಕೇ